ನೆಲ್ಯಾಡಿ : ಸಾಮಾಜಿಕ ಜಾಲತಾಣದಲ್ಲಿ ಕ್ರಿಶ್ಚಿಯನ್ ಧರ್ಮದ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿ ಇಚ್ಲಂಪಾಡಿ ನಿವಾಸಿ ಪುರುಷೋತ್ತಮ ಓ ದವಳಗಿರಿ ಎಂಬವರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುರುಷೋತ್ತಮ ಓ ದವಳಗಿರಿ ಅವರು ಕ್ರಿಶ್ಚಿಯನ್ ಧರ್ಮದ ಬಗ್ಗೆ ಅವಹೇಳನಕಾರಿ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣವಾದ ತನ್ನ ಫೇಸ್ಬುಕ್ ಖಾತೆಯಲ್ಲಿ ಹರಿಬಿಟ್ಟು ಧರ್ಮ-ಧರ್ಮಗಳ ನಡುವೆ ಸಾಮರಸ್ಯ ಕೆಡಿಸಿ ಕೋಮು ಗಲಭೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಇಚ್ಲಂಪಾಡಿ ಬರಮಾರು ಕೈಪನಡ್ಕ ನಿವಾಸಿ ಮೇಹಿಜಾರ್ಜ್ ಎಂಬವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದರು.
ಈ ದೂರಿನಂತೆ ಉಪ್ಪಿನಂಗಡಿ ಪೊಲೀಸರು ಪುರುಷೋತ್ತಮ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

























