ಅಯೋಧ್ಯೆ ರಾಮ ಮಂದಿರದಲ್ಲಿ ಕರ್ನಾಟಕದ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತಿದ ರಾಮಲಲ್ಲಾ ಮೂರ್ತಿಯೇ ಪ್ರತಿಷ್ಠಾಪನೆಗೆ ಆಯ್ಕೆ ಆಗಿದೆ. ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಚಂಪತ್ ರಾಯ್, ಕರ್ನಾಟಕದ ಅರುಣ್ ಯೋಗಿರಾಜ್ ಅವರು 15-20 ದಿನಗಳ ಕಾಲ ಮನೆಗೆ ಕರೆ ಮಾಡದೇ ಏಕಾಗ್ರತೆಯಿಂದ ರಾಮಲಲ್ಲಾ ಮೂರ್ತಿಯನ್ನ ಕೆತ್ತಿದ್ದಾರೆ. ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಒಟ್ಟು 11 ಜನರ ಈ ಮೂರ್ತಿಯನ್ನ ಒಮ್ಮತಿಸಿದ್ದಾರೆ. ಟ್ರಸ್ಟ್ ಕಮಿಟಿಯಲ್ಲಿ 15 ರಲ್ಲಿ 11 ಸದಸ್ಯರು ಈ ಮೈಸೂರು ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿರುವ ಮೂರ್ತಿಯನ್ನೇ ಒಪ್ಪಿಕೊಂಡಿದ್ದಾರೆ ಎಂದಿದ್ದಾರೆ.
ಜ.22 ರಂದು ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ದೇಶದ ಮೂವರು ಪ್ರಖ್ಯಾತ ಶಿಲ್ಪಿಗಳಿಗೆ ಮೂರ್ತಿ ಕೆತ್ತನೆ ಕಾಯಕ ಒಲಿದು ಬಂದಿದೆ. ಮೂರರಲ್ಲಿ ಒಂದು ರಾಮಲಲ್ಲಾ ಮೂರ್ತಿಯ ಕೆತ್ತನೆಯನ್ನು ಮೈಸೂರು ಮೂಲದ ಶಿಲ್ಪಿ ಅರುಣ್ ಯೋಗಿರಾಜ್ ಪೂರ್ಣಗೊಳಿಸಿದ್ದಾರೆ. ಮೈಸೂರಿನ ಅರುಣ್ ಯೋಗಿರಾಜ್ ಕೈಯಲ್ಲಿ ರಾಮಲಲ್ಲಾ ಮೂರ್ತಿ ಮೂಡಿಬಂದಿದೆ.


























