ಪಟ್ಟಣಂತಿಟ್ಟ : ವರ್ಷದ ಮೊದಲ ಹಬ್ಬವಾದ ಸಂಕ್ರಾಂತಿಯಂದು ಜ್ಯೋತಿ ರೂಪದಲ್ಲಿ ಅಯ್ಯಪ್ಪ ಸ್ವಾಮಿ ಭಕ್ತರಿಗೆ ದರ್ಶನ ನೀಡಿದ್ದಾನೆ.
ಸಂಜೆ 6.48ರ ಸುಮಾರಿಗೆ ಅಯ್ಯಪ್ಪ ದೇಗುಲದ ಎದುರಿನ ಪೊನ್ನಂಬಲಮೇಡುವಿನಲ್ಲಿ ಜ್ಯೋತಿ ದರ್ಶನವಾಯಿತು.
ಈ ವೇಳೆ ಅಯ್ಯಪ್ಪನ ಗುಣಗಾನ ಮಾಡುತ್ತಾ ಲಕ್ಷಾಂತರ ಭಕ್ತರು ಮಕರ ಜ್ಯೋತಿ ದರ್ಶನ ಪಡೆದರು.
ಕೇರಳದ ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಸೋಮವಾರ ಮಕರ ಸಂಕ್ರಾಂತಿ ಪ್ರಯುಕ್ತ ವಿಶೇಷ ಪೂಜೆ ಆಯೋಜನೆಗೊಂಡಿದ್ದವು. ಪಂದಳ ರಾಜಮನೆತನದಿಂದ ಆಭರಣಗಳನ್ನು ತಂದು ಆಯ್ಯಪ್ಪ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಮಹಾಮಂಗಳಾರತಿ ವೇಳೆಗೆ ಜ್ಯೋತಿರೂಪದಲ್ಲಿ ಅಯ್ಯಪ್ಪ ಸ್ವಾಮಿ ದರ್ಶನ ನೀಡಿದ್ದಾರೆ.
ಭಕ್ತ ಸಮೂಹದ ನಿರ್ವಹಣೆ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ದೇವಾಲಯ ಮತ್ತು ಅದರ ಸುತ್ತಮುತ್ತ ಹೆಚ್ಚಿನ ಪೊಲೀಸ್ ಭದ್ರತೆ ಕಲ್ಪಿಸಲಾಗಿತ್ತು.


























