ವಿಟ್ಲ : ನಿಯಂತ್ರಣ ತಪ್ಪಿ ಟೆಂಪೋ ಟ್ರಾವೆಲರ್ ಪಲ್ಟಿಯಾದ ಘಟನೆ ವಿಟ್ಲ ಸಮೀಪದ ಚಂದಳಿಕೆ ತಿರುವಿನಲ್ಲಿ ನಡೆದಿದೆ.

ಶಬರಿಮಲೆಯಿಂದ ಬರುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳಿದ್ದ ಉಜಿರೆ ಮೂಲದ ಟೆಂಪೋ ಟ್ರಾವೆಲರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಘಟನೆಯಲ್ಲಿ ಇಬ್ಬರಿಗೆ ಗಾಯವಾಗಿದೆ ಎಂದು ವರದಿಯಾಗಿದೆ.

ಗಾಯಾಳುಗಳಿಗೆ ವಿಟ್ಲ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ವಾಹನದ ಒಂದು ಬದಿ ಜಖಂ ಆಗಿದೆ.



























