ಪೆರುವಾಜೆ : ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಹಿನ್ನೆಲೆಯಲ್ಲಿ ನೂತನ ಬ್ರಹ್ಮರಥ ಸಮರ್ಪಣೆಯು ಮಂಗಳವಾರ ನೆರವೇರಿತು.

ಮಂಗಳವಾರ ಬೆಳಗ್ಗೆ ಕ್ಷೇತ್ರದ ತಂತ್ರಿ ಕೆಮ್ಮಿಂಜೆ ನಾಗೇಶ ತಂತ್ರಿ, ಕೆಮ್ಮಿಂಜೆ ಕಾರ್ತಿಕ್ ತಂತ್ರಿ, ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನಡೆಯಿತು.

ಮಹಾಗಣಪತಿ ಹೋಮ, ಬ್ರಹ್ಮರಥ ಶುದ್ದಿ ಕಲಶ,ಪೂರ್ವಾಹ್ನ ಗಂಟೆ 9.45 ರಿಂದ 10.10 ರ ಕುಂಭಲಗ್ನದ ಸುಮುಹೂರ್ತದಲ್ಲಿ ಶ್ರೀ ದೇವರಿಗೆ ಬ್ರಹ್ಮರಥ ಸಮರ್ಪಣೆ ಮತ್ತು ಪಲ್ಲಕ್ಕಿ ಸಮರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ಮಾಣಿಲ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಪವಿತ್ರಪಾಣಿ ಸುಬ್ರಹ್ಮಣ್ಯ ನಿಡ್ವಣ್ಣಾಯ, ಕ್ಷೇತ್ರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಿ.ಪದ್ಮನಾಭ ಶೆಟ್ಟಿ ಪೆರುವಾಜೆ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪಿ. ವೆಂಕಟಕೃಷ್ಣ ರಾವ್, ಜಯಪ್ರಕಾಶ್ ರೈ, ದಾಮೋದರ ನಾಯ್ಕ, ನಾರಾಯಣ ಕೊಂಡೆಪ್ಪಾಡಿ, ಜಗನ್ನಾಥ ರೈ, ಭಾಗ್ಯಲಕ್ಷ್ಮಿ, ಯಶೋದ ಎ,ಎಸ್., ಜಿ.ಪಂ.ಮಾಜಿ ಸದಸ್ಯೆ ರಾಜೀವಿ ಆರ್ ರೈ, ಪೆರುವಾಜೆ ಗ್ರಾ.ಪಂ.ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು, ಕ್ಷೇತ್ರದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಉಮೇಶ್ ಕೆಎಂಬಿ, ಮಾಜಿ ಸದಸ್ಯರಾದ ಮಂಜಪ್ಪ ರೈ ಬೆಳ್ಳಾರೆ, ಭೋಜರಾಜ ಶೆಟ್ಟಿ ಕಲ್ಕಂಪಾಡಿಗುತ್ತು, ದೇವದಾಸ್ ಶೆಟ್ಟಿ ಕ್ಷೇತ್ರದ ಕಚೇರಿ ವ್ಯವಸ್ಥಾಪಕ ವಸಂತ ಪೆರುವಾಜೆ ಮೊದಲಾದವರು ಉಪಸ್ಥಿತರಿದ್ದರು.































