ಪುತ್ತೂರು : ಸಾಮಾಜಿಕ ಜಾಲತಾಣಗಳಲ್ಲಿ “ರಾಮಮಂದಿರದ ಮಂತ್ರಾಕ್ಷತೆ ವಿತರಣೆ ಮಾಡುತ್ತಿದ್ದ ಹಿಂದೂ ಕಾರ್ಯಕರ್ತನ ಮೇಲೆ ಪುತ್ತಿಲ ಪರಿವಾರದ ಬೆಂಬಲಿಗರಿಂದ ಹಲ್ಲೆ” ಎಂಬುದಾಗಿ ಸುದ್ದಿ ಪ್ರಸಾರವಾಗುತ್ತಿದ್ದು, ಈ ಬಗ್ಗೆ ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಿದೆ.
ಪುತ್ತೂರು ತಾಲೂಕು ಮುಂಡೂರು ಗ್ರಾಮದ ಬರೆಕೊಲಾಡಿ ಎಂಬಲ್ಲಿ ಸಿವಿಲ್ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಅಕ್ಕಪಕ್ಕದ ಮನೆಯವರು ಜಗಳವಾಡಿಕೊಂಡು ಪರಸ್ಪರ ಹಲ್ಲೆ ನಡೆಸಿರುವುದಾಗಿದೆ.
ಈ ಬಗ್ಗೆ ಈಗಾಗಲೇ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಜ.15 ರಂದು ಅ.ಕ್ರ 07-2024 (ಕಲಂ: 341,447,323,324,506, ಜೊತೆಗೆ 34 ಐಪಿಸಿ) ಹಾಗೂ ಅ.ಕ್ರ 08-2024 ಕಲಂ: ಐಪಿಸಿ 1860 (U/s. ಐಪಿಸಿ 1860 (U/s-323,324,504,506 ಜೊತೆಗೆ 34) ರಂತೆ ದೂರು ಮತ್ತು ಪ್ರತಿದೂರು ದಾಖಲಾಗಿದ್ದು, ಎರಡೂ ಪ್ರಕರಣಗಳ ತನಿಖೆ ಪ್ರಗತಿಯಲ್ಲಿರುತ್ತದೆ.
ಈ ಬಗ್ಗೆ ಸಾರ್ವಜನಿಕರು ಯಾವುದೇ ಸುಳ್ಳುಸುದ್ದಿ/ತಪ್ಪುಸಂದೇಶಗಳಿಗೆ ಕಿವಿಗೊಡಬಾರದಾಗಿ ಪೊಲೀಸ್ ಇಲಾಖೆ ತಿಳಿಸಿದೆ.

























