ಪುತ್ತೂರು : ಮಹಿಳೆಯೋರ್ವರು ಮನೆಯ ಬಳಿಯ ಗುಡ್ಡದ ಮೇಲೆ ನಿರ್ಮಿಸಲಾದ ಕೃತಕ ನೀರಿನ ತೊಟ್ಟಿಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.
ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ಅವರ ಪತ್ನಿ ಶುಭಲಕ್ಷ್ಮೀ ಮೃತ ಮಹಿಳೆ.
ಶುಭಲಕ್ಷ್ಮೀ ಅವರು ಮನೆಯ ಬಳಿಯ ಗುಡ್ಡದ ಮೇಲೆ ಟಾರ್ಪಾಲು ಹಾಕಿ ನಿರ್ಮಿಸಲಾದ ಕೃತಕ ನೀರಿನ ತೊಟ್ಟಿಗೆ ಬಿದ್ದು ಸಾವನ್ನಪ್ಪಿದ್ದು, ಆಕಸ್ಮಿಕವೋ, ಆತ್ಮಹತ್ಯೆಯೋ ಎಂದು ತನಿಖೆ ನಂತರ ತಿಳಿದುಬರಬೇಕಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

























