ಪುತ್ತೂರು : ‘ಮುಂದಿನ ಚುನಾವಣೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಅವಕಾಶ ಸಿಗುವಂತಾಗಲಿ., ಅವರಿಂದ ಇನ್ನೂ ಹೆಚ್ಚು ಅಭಿವೃದ್ಧಿ ಕೆಲಸವಾಗಲಿ ಎಂದು ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಸ್ವಾಮೀಜಿ ಹೇಳಿದರು.
ಅವರು ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ನಡೆಯುತ್ತಿರುವ ವಾರ್ಷಿಕ ಜಾತ್ರೋತ್ಸವ, ಬ್ರಹ್ಮರಥೋತ್ಸವದ ಪ್ರಯುಕ್ತ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ವೇಳೆ ನಳಿನ್ ಕುಮಾರ್ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
‘ಮುಂದಿನ ಚುನಾವಣೆಯಲ್ಲಿ ಅವರಿಗೆ ಮತ್ತೆ ಅವಕಾಶ ಸಿಕ್ಕಿ., ಜನರ ಆಶೀರ್ವಾದ ದೊರೆಯಲಿ, ಅವರು ಮಂತ್ರಿಯಾಗಿ ಬರಲಿ ಎಂದರು.
ನಳಿನ್ ಕುಮಾರ್ ಕಟೀಲ್ ಅವರು ಪ್ರಚಾರ ಬಯಸದೆ ಅನೇಕರಿಗೆ ಸಹಾಯಹಸ್ತ ನೀಡಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸದಸ್ಯನಾಗಿದ್ದಾಗಿನಿಂದ ಅವರನ್ನು ಬಲ್ಲೆ ಎಂದರು.
ಈ ವೇಳೆ ವೇದಿಕೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು.

























