ಉರಿಮಜಲು : ಮಹಾಮಾರಿ ಸೋಂಕಿನಿಂದ ಇಡೀ ದೇಶವೇ ಅಕ್ಷರಶಃ ನಲುಗಿ ಹೋಗಿದ್ದು, ಇದರ ಆರ್ಭಟ ಇನ್ನೂ ಕಡಿಮೆಯಾಗಿಲ್ಲ. ಆದರೇ ಈ ಸಮಯದಲ್ಲಿ ಸರ್ಕಾರದ ಕಟ್ಟುನಿಟ್ಟಿನ ಲಾಕ್ ಡೌನ್ ಕ್ರಮಗಳನ್ನು ಉಲ್ಲಂಘನೆ ಮಾಡಿ ಮಾಸ್ಕ್ ಧರಿಸದೇ ಪೆಟ್ರೋಲ್ ಹಾಕುವ ಸಿಬ್ಬಂದಿಯನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡ ಘಟನೆ ವಿಟ್ಲ ಕಬಕ ರಸ್ತೆಯ ಉರಿಮಜಲಿನ ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ.
ಮಾಸ್ಕ್ ಧರಿಸದೇ ಪೆಟ್ರೋಲ್ ಹಾಕುವ ಸಿಬ್ಬಂದಿಗಳ ಮೇಲೆ ಪೆಟ್ರೋಲ್ ಹಾಕಲು ಬಂದ ಸಾರ್ವಜನಿಕರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ವೀಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.