ಪುತ್ತೂರು : ಹಿಂದೂ ಮುಖಂಡ ಅವಿನಾಶ್ ಅವರಿಗೆ ಗಡಿಪಾರು ನೋಟೀಸ್ ಜಾರಿ ಮಾಡಲಾಗಿದೆ.
ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನರಿಮೊಗರು ಗ್ರಾಮದ ಪುರುಷರಕಟ್ಟೆ ನಿವಾಸಿ, ಹಿಂದೂ ಮುಖಂಡ ಅವಿನಾಶ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಿಂದ ಬೀದರ್ ಜಿಲ್ಲಾ ವ್ಯಾಪ್ತಿಯ ಸಾಂತಪುರ ಪೊಲೀಸ್ ಠಾಣಾ ಸರಹದ್ದಿಗೆ ಕರ್ನಾಟಕ ಪೊಲೀಸ್ ಅಧಿನಿಯಮ-1963 ರ ಕಲಂ: 55 ಪ್ರಕಾರ ಗಡಿಪಾರಿಗೆ ನೋಟೀಸ್ ನೀಡಲಾಗಿದೆ.
ಪುತ್ತೂರು ಸಹಾಯಕ ಆಯುಕ್ತರ ಕಚೇರಿಯ ನ್ಯಾಯಾಲಯದಲ್ಲಿ ಜ.24ರಂದು ವಿಚಾರಣೆ ನಡೆಯಲಿದೆ.
ವಿಚಾರಣೆಗೆ ಸಂಬಂಧಪಟ್ಟಂತೆ ಅವಿನಾಶ್ ಸ್ವತಃ ಯಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ತಿಳಿಸಲಾಗಿದ್ದು, ತಪ್ಪಿದಲ್ಲಿ ಸದರಿ ಪ್ರಕರಣದಲ್ಲಿ ಅವರಿಗೆ ಆಸಕ್ತಿ ಇಲ್ಲವೆಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷೀಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ನೋಟೀಸ್ ನಲ್ಲಿ ತಿಳಿಸಲಾಗಿದೆ.





























