ಪುತ್ತೂರು : ಕಲ್ಲೇಗ ಕಲ್ಕುಡ ದೇವಸ್ಥಾನದ ಕಲ್ಕುಡ-ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮೋತ್ಸವ ಹಿನ್ನೆಲೆ ಜ.24 ರಂದು ರಸ್ತೆ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.
ಜ.24 ರಂದು ಕಬಕ ಗ್ರಾಮದ ಕಲ್ಲೇಗ ಶ್ರೀ ಕಲ್ಕುಡ ದೇವಸ್ಥಾನದ ಕಲ್ಕುಡ-ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮೋತ್ಸವ ನಡೆಯಲಿದ್ದು, ಸದ್ರಿ ಜಾತ್ರೆಯಲ್ಲಿ ಕಾರ್ಜಾಲು ಗುತ್ತಿನಿಂದ ಭಂಡಾರ ಹೊರಟು ಕಲ್ಲೇಗ ದೇವಸ್ಥಾನ ತಲುಪುವ ಅಂದಾಜು ಸಮಯ 07-45 ರಿಂದ 9-15 ಗಂಟೆ ವರೆಗೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸುಗಮಕ್ಕೆ ಮಾರ್ಗ ಬದಲಾವಣೆ ಇದ್ದು ವಾಹನ ಚಾಲಕರು ಈ ಕೆಳಗಿನಂತೆ ಸೂಚನೆಗಳನ್ನು ಪಾಲಿಸಬೇಕಾಗಿ ವಿನಂತಿಸಲಾಗಿದೆ.
ಸೂಚನೆಗಳು:
- ಪುತ್ತೂರಿನಿಂದ ಮಂಗಳೂರಿಗೆ ತೆರಳುವ ವಾಹನಗಳು ಮಂಜಲ್ಪಡ್ಪು ಕೊಡಿಪ್ಪಾಡಿ ಕಬಕ ಮೂಲಕ ಮಂಗಳೂರಿಗೆ ತೆರಳುವುದು.
- ಮಂಗಳೂರಿನಿಂದ ಪುತ್ತೂರು, ಮೈಸೂರು ಕಡೆಗೆ ತೆರಳುವ ವಾಹನಗಳು ಮುರ, ಮುರ ರೈಲ್ವೆ ಬ್ರಿಡ್ಜ್ ಮೂಲಕ ಬನ್ನೂರು ಪಡೀಲ್ ಮೂಲಕ ಪುತ್ತೂರಿಗೆ ತೆರಳಬೇಕು.
- ಕಲ್ಲೇಗ ಜಾತ್ರೆಗೆ ಬರುವವರು ವಿವೇಕಾನಂದ ಕಾಲೇಜ್ ಹಾಗೂ ಪಾರ್ಕಿಂಗ್ ಯೋಗ್ಯ ಸ್ಥಳದಲ್ಲಿ ಪಾರ್ಕ್ ಮಾಡತಕ್ಕದ್ದು ರಸ್ತೆಯಲ್ಲಿ ನಿಲ್ಲಿಸಿ ಸಾರ್ವಜನಿಕರ ರಸ್ತೆ ಸಂಚಾರಕ್ಕೆ ತೊಡಕು ಉಂಟು ಮಾಡಬಾರದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



























