ಪುತ್ತೂರು : ಹಿಂದೂ ಸಂಘಟನೆಯ ಕಾರ್ಯಕರ್ತರಿಗೆ ಉಪವಿಭಾಗೀಯ ದಂಡಾಧಿಕಾರಿಗಳು ಗಡಿಪಾರಿಗೆ ನೋಟೀಸ್ ನೀಡಿರುವುದನ್ನು ಪುನರ್ ಪರಿಶೀಲಿಸಿ ಹಿಂಪಡೆಯಬೇಕೆಂದು ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಆಗ್ರಹಿಸಿದ್ದಾರೆ.
ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಹ ಸಂಯೋಜಕ ದಿನೇಶ್ ಪಂಜಿಗ ಹಾಗೂ ಹಿಂಜಾವೇ ಮುಖಂಡ ಅವಿನಾಶ್ ರವರ ಮೇಲೆ ವಿನಾಕಾರಣ ಯಾವುದೇ ಗಂಭೀರವಾದ ಅಪರಾಧ ಇಲ್ಲದಿದ್ದರೂ ಸರಕಾರ ಹಿಂದೂ ಕಾರ್ಯಕರ್ತನನ್ನು ಧಮನಿಸುವ ಷಡ್ಯಂತ್ರಕ್ಕೆ ಕೈ ಹಾಕಿರುವುದು ಹಿಂದೂ ವಿರೋಧಿ ನೀತಿಯಾಗಿದೆ ಎಂದು ಅವರು ಹೇಳಿದರು.
ಇದೇ ರೀತಿ ಸರಕಾರ ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲೆ ಗಡಿಪಾರು ನೋಟೀಸ್ ನೀಡಿದರೆ ಬಿಜೆಪಿ ಸುಮ್ಮನೆ ಕೂರುವುದಿಲ್ಲ., ಇಲಾಖೆಯ ಎದುರು ಧರಣಿ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.


























