ಪುತ್ತೂರು : ಅಪರಿಚಿತ ವ್ಯಕ್ತಿಯೋರ್ವ ಅಪ್ರಾಪ್ತ ಬಾಲಕಿಯ ಜೊತೆ ಅಸಭ್ಯವಾಗಿ ವರ್ತಿಸಿದ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆಂದು ವರದಿಯಾಗಿದೆ.
ಕಡಬ ಮೂಲದ ಶಾಕೀರ್ ಬಂಧಿತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಪುತ್ತೂರು ಮೂಲದ ಅಪ್ರಾಪ್ತ ಬಾಲಕಿ ದೇವಸ್ಥಾನದ ಗದ್ದೆಯಲ್ಲಿ ನಡೆಯುತ್ತಿದ್ದ ಕಂಬಳ ವೀಕ್ಷಿಸಲು ತಂದೆ ಹಾಗೂ ತಮ್ಮನ ಜೊತೆ ಬಂದಿದ್ದು, ಕಂಬಳ ವೀಕ್ಷಣೆ ಮಾಡಿ ಮನೆಗೆ ತೆರಳುವ ಸಂದರ್ಭ ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಸಾರ್ವಜನಿಕ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ 30 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಬಾಲಕಿ ಜೊತೆ ಅಸಭ್ಯ ರೀತಿಯಲ್ಲಿ ವರ್ತಿಸಿದ್ದಾನೆಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಅ.ಕ್ರ 06/2024 ಕಲಂ: 354 (A) ಐಪಿಸಿ ಮತ್ತು 8 ,12 ಫೋಕ್ಸೋ ಆಕ್ಟ್ ರಂತೆ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ವರದಿಯಾಗಿದೆ.

























