ಪುತ್ತೂರು : ಸೆವೆನ್ ಡೈಮಂಡ್ ಸ್ಪೋರ್ಟ್ಸ್ & ಆರ್ಟ್ಸ್ ಕ್ಲಬ್ (ರಿ) ಪುತ್ತೂರು ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಯ ಆಯ್ದ ಆಹ್ವಾನಿತ 8 ತಂಡಗಳ, ಹೊನಲು ಬೆಳಕಿನ ಲೀಗ್ ಮಾದರಿಯ ಪುರುಷರ ವಾಲಿಬಾಲ್ ಪಂದ್ಯಾಟ ಫೆ.10 ರಂದು ಕಿಲ್ಲೆ ಮೈದಾನದಲ್ಲಿ ನಡೆಯಲಿದ್ದು, ಈ ಹಿನ್ನೆಲೆ ಆಮಂತ್ರಣ ಬಿಡುಗಡೆ ಕಾರ್ಯಕ್ರಮವು ಜ.27 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ನಡೆಯಿತು.

ಸಹಜ್ ರೈ ಬಳ್ಳಜ್ಜ ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು.

ಈ ವೇಳೆ ಮಾತನಾಡಿದ ಅವರು, ಪುತ್ತೂರಿನಲ್ಲಿ ಕ್ರೀಡೆಗೆ ವಿಶೇಷ ಒತ್ತು ನೀಡುವ ಮುಖಾಂತರ ಪುತ್ತೂರಿನ ಕ್ರೀಡಾಪಟುಗಳು ಇಂದು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ವಾಲಿಬಾಲ್ ನಮ್ಮ ಮಣ್ಣಿನ ಕ್ರೀಡೆ, ದೇಶದ ಕ್ರೀಡೆ ಎಂದು ಹೇಳಿದರೂ ತಪ್ಪಾಗ್ಲಿಕ್ಕಿಲ್ಲ., ಪುತ್ತೂರಿನಲ್ಲಿ ಲೀಗ್ ಮಾದರಿಯ ರೀತಿಯಲ್ಲಿ ವಾಲಿಬಾಲ್ ಪಂದ್ಯಾಟವನ್ನು ಆಯೋಜನೆ ಮಾಡಿದ್ದಾರೆ. ಶ್ರೀ ಮಹಾಲಿಂಗೇಶ್ವರ ದೇವರ ಆಶೀರ್ವಾದದಿಂದ ಈ ಪಂದ್ಯಾಟ ಅಭೂತಪೂರ್ವ ಯಶಸ್ಸು ಕಾಣಲಿ ಎಂದು ಶುಭ ಹಾರೈಸಿದರು.

























