ಮಂಗಳೂರು : ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಸೂಚನೆಯ ಮೇರೆಗೆ ಮಂಗಳೂರಿನಲ್ಲಿ ರಾಜ್ಯಮಟ್ಟದ ಬೃಹತ್ ಕಾರ್ಯಕರ್ತರ ಸಮಾವೇಶ ಫೆ.17 ರಂದು ನಡೆಯಲಿದೆ.
ಈ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು, ಎಐಸಿಸಿ ಕಾರ್ಯದರ್ಶಿಗಳು, ಸಚಿವರು, ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


























