ಪುತ್ತೂರು : ಪುತ್ತಿಲ ಪರಿವಾರದ ಸಮಾಲೋಚನಾ ಸಮಾವೇಶ ಫೆ.5 ರಂದು ಕೋಟೇಚಾ ಹಾಲ್ ನಲ್ಲಿ ನಡೆಯಲಿದೆ.
ಪ್ರಸನ್ನ ಮಾರ್ತ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಶ್ರೀಕೃಷ್ಣ ಉಪಾಧ್ಯಾಯ ಅವರು ಸಂಘಟನಾ ಸಂದೇಶ ನೀಡಲಿದ್ದಾರೆ. ಅರುಣ್ ಕುಮಾರ್ ಪುತ್ತಿಲ ಉಪಸ್ಥಿತಿ ವಹಿಸಲಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆ ಪುತ್ತಿಲ ಪರಿವಾರದ ಈ ಸಮಾಲೋಚನಾ ಸಮಾವೇಶ ಭಾರೀ ಮಹತ್ವ ಪಡೆದಿದ್ದು, ಕಾರ್ಯಕರ್ತರ ಬಳಿ ಅವರ ಅಭಿಪ್ರಾಯ ಸಂಗ್ರಹಿಸುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.
ಬಿಜೆಪಿ ಸೇರ್ಪಡೆಯ ವಿಚಾರ ಬಹಳಷ್ಟು ಸದ್ದು ಮಾಡುತ್ತಿದ್ದು, ಈ ವಿಚಾರದಲ್ಲಿ ಅಭಿಪ್ರಾಯ ಸಂಗ್ರಹ ಸಮಾಲೋಚನೆ ನಡೆಯುವ ಸಾಧ್ಯತೆಯಿದೆ.


























