ಪುತ್ತೂರು : ಮನೆಯಿಂದ ಶಾಲೆಗೆಂದು ಬಂದ ವಿದ್ಯಾರ್ಥಿನಿಯೊಬ್ಬಳು ಶಾಲೆಗೂ ಬಾರದೆ, ಮನೆಗೂ ಹಿಂದಿರುಗದೆ ನಾಪತ್ತೆಯಾಗಿದ್ದು, ಕಾಸರಗೋಡಿನಲ್ಲಿ ಪತ್ತೆಯಾಗಿದ್ದಾಳೆ.
6ನೇ ತರಗತಿಯಲ್ಲಿ ಕಲಿಯುತ್ತಿರುವ ಬಾಲಕಿ ನಾಪತ್ತೆಯಾಗಿರುವುದಾಗಿ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಬಾಲಕಿ ಕಾಸರಗೋಡಿನಲ್ಲಿ ಪತ್ತೆಯಾಗಿದ್ದು, ಪುತ್ತೂರಿಗೆ ಕರೆತರಲು ಮನೆಮಂದಿ ಪೊಲೀಸರೊಂದಿಗೆ ಕಾಸರಗೋಡಿಗೆ ತೆರಳಿದ್ದಾರೆ ಎಂದು ವರದಿಯಾಗಿದೆ.


























