ವಿಟ್ಲ : ಖಾಸಗಿ ಬಸ್ ಚಾಲಕ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಬಸ್ ಚಲಾಯಿಸಿದ ಪರಿಣಾಮ ಮಹಿಳೆಯೋರ್ವರು ಬಸ್ ನಿಂದ ಬಿದ್ದು ಗಾಯಗೊಂಡಿರುವುದಾಗಿ ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಪ್ಪಿನಂಗಡಿ ನಿವಾಸಿ ಮಹಿಳೆ ನೀಡಿರುವ ದೂರಿನ ಮೇರೆಗೆ ಖಾಸಗಿ ಬಸ್ ಚಾಲಕ ಅಬ್ದುಲ್ ಸಮದ್ ಹಾಗೂ ನಿರ್ವಾಹಕ ರಾಧಾಕೃಷ್ಣ ಬಳ್ಳಾಲ್ ವಿರುದ್ಧ ಪ್ರಕರಣ ದಾಖಲಾಗಿದೆ.
ಜ.31 ರಂದು ಖಾಸಗಿ ಬಸ್ ಚಾಲಕ ಅಬ್ದುಲ್ ಸಮದ್ ರವರು ಬಸ್ ನಲ್ಲಿ ಪ್ರಯಾಣಿಕರನ್ನು ಕುಳ್ಳಿರಿಸಿಕೊಂಡು ಚಲಾಯಿಸುತ್ತಾ, ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಮಾಣಿ ಎಂಬಲ್ಲಿ ಬಸ್ಸನ್ನು ಅಜಾಗರೂಕತೆ ಮತ್ತು ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ, ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ದೂರುದಾರ ಮಹಿಳೆಯ ತಾಯಿ ಬಸ್ಸಿನ ಮುಂಬಾಗಿಲಿನಿಂದ ಹೊರಗೆ ಎಸೆಯಲ್ಪಟ್ಟು ಬಿದ್ದು ಗಾಯವಾಗಿರುತ್ತದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಬಸ್ ಚಾಲಕ ಅಬ್ದುಲ್ ಸಮದ್ ಹಾಗೂ ನಿರ್ವಾಹಕ ರಾಧಾಕೃಷ್ಣ ಬಳ್ಳಾಲ್ ರವರ ವಿರುದ್ದ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 20/2024 ಕಲಂ: 279, 337 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

























