ಬೆಳ್ತಂಗಡಿ : ಲಾರಿ ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿಗಳು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಲಾರಿ ಚಾಲಕನ ವಿರುದ್ಧ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫೆ.4 ರಂದು ಮಧ್ಯಾಹ್ನ ಬೆಳ್ತಂಗಡಿ ತಾಲೂಕು ಉಜಿರೆ ಗ್ರಾಮದ ಗಾಂಧಿನಗರ ಎಂಬಲ್ಲಿ ಲಾರಿಯನ್ನು ಅದರ ಚಾಲಕ ಬಸವರಾಜ್ ಎಂಬಾತ ನಿರ್ಲಕ್ಷ್ಯ ಮತ್ತು ದುಡುಕುತನದಿಂದ ಚಲಾಯಿಸಿಕೊಂಡು ಹೋಗಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ಬಳಿಕ ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ಪಾದಚಾರಿಗಳಾದ ಕೃಷ್ಣಪ್ಪ ಮತ್ತು ಮೋಹಿನಿ ಎಂಬವರಿಗೆ ಡಿಕ್ಕಿ ಹೊಡೆದಿದ್ದು, ಅವರು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.
ಲಾರಿ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದುದರಿಂದ ಅದಕ್ಕೆ ಸಂಪರ್ಕ ಇದ್ದ ಮತ್ತೆ ನಾಲ್ಕು ವಿದ್ಯುತ್ ಕಂಬಗಳು ಕೂಡ ತುಂಡಾಗಿ ಬಿದ್ದು ಕಂಬಕ್ಕೆ ಅಳವಡಿಸಿದ ವಿದ್ಯುತ್ ತಂತಿಗಳು ಅಸ್ತವ್ಯಸ್ಥವಾಗಿರುತ್ತದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 13/2024 ಕಲಂ: 279,304(A)ಭಾ.ದಂ.ಸಂ;INDIAN ELECTRICITY ACT (AMEND)2003(U/S-139) ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

























