ಬೆಳ್ತಂಗಡಿ : ದ್ವಿಚಕ್ರ ವಾಹನ ಹಾಗೂ ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಬಸ್ ಚಾಲಕನ ವಿರುದ್ಧ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫೆ.4 ರಂದು ಮಧ್ಯಾಹ್ನ ಧರನೇಂದ್ರ ಎಂಬವರು ದ್ವಿಚಕ್ರ ವಾಹನವನ್ನು ಸವಾರಿ ಮಾಡಿಕೊಂಡು ಹೋಗುತ್ತಿರುವಾಗ, ಬೆಳ್ತಂಗಡಿ ತಾಲೂಕು ನಡ ಗ್ರಾಮದ ಸಂಜೀವನ ಎಂಬಲ್ಲಿ, ಅವರ ವಿರುದ್ದ ದಿಕ್ಕಿನಿಂದ ಖಾಸಗಿ ಬಸ್ ನ್ನು ಅದರ ಚಾಲಕ ಮೋಹನ್ ಗೌಡ ಎಂಬವರು ದುಡುಕುತನದಿಂದ ಚಲಾಯಿಸಿಕೊಂಡು ಬಂದು, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರ ಧರನೇಂದ್ರ ರವರು ಗಂಭೀರ ಗಾಯಗೊಂಡು, ಆಸ್ಪತ್ರೆಗೆ ಸಾಗಿಸುವಾಗ ದಾರಿ ಮದ್ಯೆ ಮೃತಪಟ್ಟಿರುತ್ತಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ, ಅ.ಕ್ರ: 14/2024 ಕಲಂ: 279,304(A) ಭಾ.ದಂ.ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.


























