ಪುತ್ತೂರು : ನವ ವಿವಾಹಿತೆಯೋರ್ವಳು ಪತಿ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಗಾಡಾಜೆಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಕ್ಕಾಜೆ ರಾಮ್ಮಣ್ಣ ಗೌಡ ಮತ್ತು ಪುಷ್ಪ ದಂಪತಿ ಪುತ್ರಿ ಶೋಭಾ (26) ಮೃತ ಮಹಿಳೆ.
ಶೋಭಾ ರವರನ್ನು ಕಳೆದ ಒಂದೂವರೆ ತಿಂಗಳ ಹಿಂದೆ ಪುತ್ತೂರು ತಾಲೂಕಿನ ಗಾಡಾಜೆಯ ರೋಹಿತ್ ಎಂಬವರಿಗೆ ಮದುವೆ ಮಾಡಿಕೊಡಲಾಗಿತ್ತು.
ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಶೋಭಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

























