ಮಂಗಳೂರಿನಲ್ಲಿ ಬಹು ಬೇಡಿಕೆಯಾದ ಸಿಜಿಹೆಚ್ಎಸ್ ವೆಲ್ ನೆಸ್ ಸೆಂಟರ್ ಅನ್ನು ತೆರೆಯಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಅನುಮೋದನೆ ನೀಡಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ.
ಬಹುದಿನ ಬೇಡಿಕೆಯಾದ ಸಿಜಿಹೆಚ್ಎಸ್ ವೆಲ್ ನೆಸ್ ಸೆಂಟರ್ ಅನ್ನು ಮಂಗಳೂರಿನಲ್ಲಿ ತೆರೆಯಲು ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರವು ಅನುಮೋದನೆ ನೀಡಿದೆ.
ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಮನ್ ಸುಖ್ ಮಾಂಡವಿಯ ಅವರಿಗೆ ವಂದನೆಗಳು ಎಂದು ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ 50ಕ್ಕೂ ಅಧಿಕ ಕೇಂದ್ರ ಸರ್ಕಾರದ ಇಲಾಖೆಗಳ ಸುಮಾರು 5500 ಉದ್ಯೋಗಿಗಳು, 29000ಕ್ಕೂ ಅಧಿಕ ನಿವೃತ್ತ ಕೇಂದ್ರ ಸರ್ಕಾರದ ಉದ್ಯೋಗಿಗಳಿಗೆ ವೈದ್ಯಕೀಯ ಚಿಕಿತ್ಸೆ ಪಡೆಯಲು ಅನುಕೂಲವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.



























