ಪುತ್ತೂರು : ನಗರ ಸಭಾ ವ್ಯಾಪ್ತಿಯ ಮನೆ ಮನೆ ಭೇಟಿ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಇಂದು ಪುತ್ತೂರಿನ ಪೊಲೀಸ್ ಕ್ವಾಟ್ರಸ್ ಗಳಿಗೆ ಭೇಟಿ ನೀಡಲಾಯಿತು.
ಪುತ್ತೂರು ಶಾಸಕ ಸಂಜೀವ ಮಠಂದೂರು ಪೊಲೀಸ್ ಕ್ವಾಟ್ರಸ್ ಗಳಿಗೆ ತೆರಳಿ ಅವರ ಕಾರ್ಯಗಳ ಬಗ್ಗೆ ಶ್ಲಾಘಿಸಿದರು ಆರೋಗ್ಯ ದ ಬಗ್ಗೆ ಗಮನ ಹರಿಸಲು ತಿಳಿಸಿದರು.
ಈ ಸಂದರ್ಭದಲ್ಲಿ ನಗರ ಸಭಾ ಅಧ್ಯಕ್ಷ ಜೀವಂಧರ್ ಜೈನ್ , ಪೂಡ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ನಗರ ಸಭಾ ಸದಸ್ಯ ಜಗನ್ನಿವಾಸ್ ರಾವ್, ನಗರಸಭಾ ಹಿರಿಯ ಆರೋಗ್ಯಾಧಿಕಾರಿ ಶ್ವೇತಾ ಕಿರಣ್,ಪುರೋಷೋತ್ತಮ್ ಮುಂಗ್ಲಿಮನೆ, ನಗರ ಠಾಣಾ ಇನ್ಸ್ಪೆಕ್ಟರ್ ಗೋಪಾಲ್ ನಾಯ್ಕ್, ಆಶಾ ಕಾರ್ಯಕರ್ತೆಯರು, ಅಂಗವಾಡಿ ಕಾರ್ಯಕರ್ತೆಯರು , ಆರೋಗ್ಯ ಅಧಿಕಾರಿಗಳು,ನಗರ ಸಭಾ ಸಿಬ್ಬಂದಿಗಳು ಉಪಸ್ಥಿತರಿದ್ದರು.