ಮಂಗಳೂರು : ನಿಯಂತ್ರಣ ತಪ್ಪಿ ಓಮ್ನಿ ಕಾರು ಪಲ್ಟಿಯಾದ ಘಟನೆ ಅಡ್ಯಾರ್ ಸಮೀಪದ ಸಹ್ಯಾದ್ರಿ ಕಾಲೇಜು ಬಳಿ ನಡೆದಿದೆ.

ಅಡ್ಯಾರ್ ಸಮೀಪದ ಸಹ್ಯಾದ್ರಿ ಕಾಲೇಜು ಬಳಿ ನಿಯಂತ್ರಣ ತಪ್ಪಿ ಓಮ್ನಿ ಕಾರು ಪಲ್ಟಿಯಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.

ಘಟನಾ ಸ್ಥಳಕ್ಕೆ ಸಂಚಾರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.



























