ಬೆಂಗಳೂರು : ಪ್ರೀತಿಸಿದ ಹುಡುಗಿ ಬೇರೊಬ್ಬನ ಜೊತೆ ಅಕ್ರಮ ಸಂಬಂಧ ಹೊಂದಿದ್ದರಿಂದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಅನ್ಬರಾಸನ್ ಫ್ಲಿಪ್ ಕಾರ್ಟ್ನಲ್ಲಿ ಮ್ಯಾನೇಜರ್ ಆಗಿದ್ದ. ಐಟಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಯುವತಿ ಮೊದಲೇ ಮದುವೆಯಾಗಿ ವಿಚ್ಛೇದನ ಪಡೆದುಕೊಂಡಿದ್ದಳು. ಬಳಿಕ ಅನ್ಬರಸನ್ನ್ನು ಲವ್ ಮಾಡುತ್ತಿದ್ದಳು. ಈ ನಡುವೆ ಸಂತೋಷ್ ಎಂಬಾತನ ಜೊತೆ ಕೂಡ ಒಡನಾಟ ಇಟ್ಟುಕೊಂಡಿದ್ದಳಂತೆ.
ಈ ವಿಚಾರ ಗೊತ್ತಾಗುತ್ತಿದ್ದಂತೆ ಅನ್ಬರಸನ್ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯುವತಿಯೇ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾಳೆ ಎಂದು ಅನ್ಬರಸನ್ ಪೋಷಕರು ಆರೋಪಿಸಿದ್ದಾರೆ.
ಇನ್ನೂ ಈ ಸಂಬಂಧ ಪರಪ್ಪನ ಅಗ್ರಹಾರ ಠಾಣೆಯಲ್ಲಿ ದೂರು ದಾಖಲಾಗಿದೆ.