ಪುತ್ತೂರು : ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಟಿಕೆಟ್ ಗೆ ಆಗ್ರಹಿಸುತ್ತಿರುವ ಸತ್ಯಜಿತ್ ಸುರತ್ಕಲ್ ಅವರು ಖ್ಯಾತ ವೈದ್ಯ ಡಾ.ಎಂ.ಕೆ. ಪ್ರಸಾದ್ ಅವರ ಮನೆಗೆ ಭೇಟಿ ನೀಡಿದರು.
ಪುತ್ತೂರಿನಲ್ಲಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡ ಅವರು ಬಳಿಕ ಡಾ.ಎಂ.ಕೆ. ಪ್ರಸಾದ್ ಅವರ ಮನೆಯಲ್ಲಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಸತ್ಯಜಿತ್ ಅವರ ಈ ಭೇಟಿ ಲೋಕಸಭಾ ಚುನಾವಣೆಯಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಲಿದೆಯೇ ಎಂದು ಕಾದು ನೋಡಬೇಕಿದೆ..