ಪುತ್ತೂರು : ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ದರ್ಬೆಯಲ್ಲಿ ನಡೆದಿದೆ.

ಸಚಿನ್ ಟ್ರೇಡಿಂಗ್ ಬಳಿ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಕಾರಿನಲ್ಲಿದ್ದವರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ ಎಂದು ವರದಿಯಾಗಿದೆ.

ಘಟನಾ ಸ್ಥಳಕ್ಕೆ ಅರುಣ್ ಕುಮಾರ್ ಭೇಟಿ ನೀಡಿದ್ದು, ಗಾಯಾಳುಗಳನ್ನು ಅವರೇ ಸ್ವತಃ ಮನೆಗೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.



























