ಪುತ್ತೂರು : ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ಪುತ್ತೂರಿನ ಅಬ್ದುಲ್ ಮನ್ನಾನ್ ರನ್ನು ನೇಮಕ ಮಾಡಲಾಗಿದೆ.
ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಘಟಕದ ಅಧ್ಯಕ್ಷ ಡಾ.ಅನಿಲ್ ಥಾಮಸ್ ಈ ನೇಮಕ ಮಾಡಿ ಆದೇಶಿಸಿದ್ದಾರೆ.
ಅಬ್ದುಲ್ ಮನ್ನಾನ್ ಬಿ.ಎಸ್.ವಿಜಯೇಂದ್ರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದು, ಬಿ.ಎಸ್ ಯಡಿಯೂರಪ್ಪ ಈ ಹಿಂದೆ ಅಬ್ದುಲ್ ಮನ್ನಾನ್ ಗೆ ಪಕ್ಷದ ಜವಾಬ್ದಾರಿಯನ್ನು ವಹಿಸಿಕೊಟ್ಟಿದ್ದರು.
ಚುನಾವಣೆ ಸಂದರ್ಭ ಬೆಂಗಳೂರಿನಲ್ಲಿ ಪಕ್ಷದ ಪ್ರಚಾರದಲ್ಲಿ ಯುವಕರನ್ನ ಒಗ್ಗೂಡಿಸಿ ಕೆಲ ಬಿಜೆಪಿ ನಾಯಕರ ಗೆಲುವಿಗೆ ಕಾರಣರಾಗಿದ್ದು, ಕಳೆದ 17 ವರ್ಷಗಳಿಂದ ಬಿಜೆಪಿ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿದ್ದರು.
ಮಂಡಲ ಅಧ್ಯಕ್ಷ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಈ ಹಿಂದೆ ಜವಾಬ್ದಾರಿ ವಹಿಸಿದ್ದು,ಎಬಿವಿಪಿ ಸಂಘಟನೆಯಲ್ಲೂ ಗುರುತಿಸಿಕೊಂಡಿದ್ದರು. ಈ ಹಿನ್ನೆಲೆ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯರನ್ನಾಗಿ ಅಬ್ದುಲ್ ಮನ್ನಾನ್ ಅವರು ನೇಮಕ ಮಾಡಲಾಗಿದೆ ತಿಳಿದುಬಂದಿದೆ.