ಬಂಟ್ವಾಳ : ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಮಂಚಿ ಗ್ರಾಮ ಕುಕ್ಕಾಜೆ ನಿವಾಸಿ ಮಹಮ್ಮದ್ ಸಮೀವುಲ್ಲಾ, ಮಂಚಿ ಗ್ರಾಮ ಕಂಚಿಲ ನಿವಾಸಿ ಇಬ್ರಾಹಿಂ ಬಂಧಿತರು.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಅ.ಕ್ರ 04/2004 ಕಲಂ: 147,148,504,447,427, 435, 324,326,307,506 r/w 149 ಐಪಿಸಿ ಪ್ರಕರಣದಲ್ಲಿ ಆರೋಪಿಗಳಾದ ಮಹಮ್ಮದ್ ಸಮೀವುಲ್ಲಾ (34) ಹಾಗೂ ಇಬ್ರಾಹಿಂ (35) ಎಂಬವರುಗಳು ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ಅವರನ್ನು ಫೆ.12 ರಂದು ಪೊಲೀಸ್ ಉಪನಿರೀಕ್ಷರಾದ ಮೂರ್ತಿ, ಸಿಬ್ಬಂದಿಗಳಾದ ಹೆಚ್ ಸಿ ಕೃಷ್ಣ ಮತ್ತು ಪಿ ಸಿ ಯೋಗೇಶ್ ಡಿ ಎಲ್ , ಪುನೀತ್ ರವರು ಬೆಂಗಳೂರಿನಲ್ಲಿ ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.
ನ್ಯಾಯಾಲಯವು ಸದ್ರಿ ಆರೋಪಿಗಳಿಗೆ ನ್ಯಾಯಾಂಗ ಬಂಧನದ ವಿಧಿಸಿರುತ್ತದೆ.




























