ಉಪ್ಪಿನಂಗಡಿ : ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ತಾಲೂಕು ಉಪ್ಪಿನಂಗಡಿ ಗ್ರಾಮದ ಪೆರಿಯಡ್ಕ ನಿವಾಸಿ ಅತ್ತಾವುಲ್ಲಾ (22) ಮೃತ ಯುವಕ.

ಅತ್ತಾವುಲ್ಲಾ ರವರ ಸಂಬಂಧಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.
ಅತ್ತಾವುಲ್ಲಾ ತಾಯಿಯೊಂದಿಗೆ ವಾಸವಾಗಿದ್ದು, ಮಡಂತ್ಯಾರಿನ ಕಾಲೇಜಿನಲ್ಲಿ ದ್ವಿತಿಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದರು.
ಅತ್ತಾವುಲ್ಲಾ ಸುಮಾರು 1 ½ ತಿಂಗಳಿಂದ ಕಾಲೇಜಿಗೆ ಹೋಗದೇ ಮನೆಯಲ್ಲಿಯೇ ಇದ್ದು, ಮಾನಸಿಕ ಖಿನ್ನತೆಗೆ ಒಳಗಾದಂತೆ ವರ್ತಿಸುತ್ತಿದ್ದು, ಫೆ.14 ರಂದು ರಾತ್ರಿ ಆತನ ತಾಯಿ ನೆರೆಮನೆಯ ಮೆಹಂದಿ ಕಾರ್ಯಕ್ರಮಕ್ಕೆ ಹೋಗಿ ವಾಪಸ್ಸು ಮನೆಗೆ ಬಂದು ನೋಡಿದಾಗ ಅತ್ತಾವುಲ್ಲಾ ಮನೆಯ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಅತ್ತಾವುಲ್ಲಾ ಯಾವುದೋ ಕಾರಣದಿಂದ ಮಾನಸಿಕ ಖಿನ್ನತೆಗೆ ಒಳಗಾಗಿ., ಜೀವನದಲ್ಲಿ ಜಿಗುಪ್ಸೆ ಹೊಂದಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ ಹೊರತು ಆತನ ಮರಣದಲ್ಲಿ ಯಾವುದೇ ಸಂಶಯ ಇರುವುದಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಯುಡಿಆರ್ ನಂಬ್ರ 03/2024 ಕಲಂ:174 CRPC ರಂತೆ ಪ್ರಕರಣ ದಾಖಲಾಗಿದೆ.