ಭಾರತ ಮೂಲದ ದಂಪತಿ ಹಾಗೂ ಅವಳಿ ಮಕ್ಕಳು ಅಮೆರಿಕಾದ ಕ್ಯಾಲಿಫೋರ್ನಿಯಾದ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಕೇರಳ ಮೂಲದ ಆನಂದ್ ಸುಜಿತ್ ಹೆನ್ರಿ ಹಾಗೂ ಪತ್ನಿ ಆಲಿಸ್ ಪ್ರಿಯಾಂಕಾ ಹಾಗೂ 4 ವರ್ಷದ ಇಬ್ಬರು ಅವಳಿ ಮಕ್ಕಳು ಮೃತಪಟ್ಟಿದ್ದಾರೆ.
ಸಂಬಂಧಿಕರು ಕರೆ ಮಾಡಿದಾಗ ಫೋನ್ ರಿಸೀವ್ ಮಾಡದ ಕಾರಣ ಮನೆಗೆ ಬಂದಿದ್ದಾರೆ. ಈ ವೇಳೆ ಮೃತಪಟ್ಟಿರುವುದು ಗೊತ್ತಾಗಿದೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಮನೆಗೆ ಬಂದು ತಪಾಸಣೆ ನಡೆಸಿದಾಗ ದಂಪತಿ ಶವ ಬಾತ್ ರೂಮ್ನಲ್ಲಿ ಕಂಡುಬಂದಿದೆ. ಇಬ್ಬರು ಮಕ್ಕಳು ಕೋಣೆಯಲ್ಲಿ ಶವವಾಗಿದ್ರು.
ಸ್ಯಾನ್ ಮಾಟಿಯೊ ಪೊಲೀಸರ ಪ್ರಕಾರ, ಇಬ್ಬರು ಗುಂಡೇಟಿನಿಂದ ಸಾವನ್ನಪ್ಪಿದ್ದಾರೆ. ಇನ್ನಿಬ್ಬರ ಸಾವಿಗೆ ಕಾರಣ ತಿಳಿದು ಬಂದಿಲ್ಲ.
ಸದ್ಯ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


























