ಮಂಗಳೂರು : ಎಂ ಆರ್ ಪಿ ಎಲ್ ನಲ್ಲಿ ಇತ್ತೀಚೆಗೆ 200 ಕ್ಕೂ ಹೆಚ್ಚು ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆದಿದ್ದು, ಸದರಿ ನೇಮಕಾತಿಯಲ್ಲಿ ಕರ್ನಾಟಕದ ಹಾಗೂ ಸ್ಥಳೀಯ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂಬ ಕೂಗು ಕೇಳಿ ಬಂದ ಹಿನ್ನೆಲೆಯಲ್ಲಿ ಇಂದು ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಇವರ ಅಧ್ಯಕ್ಷತೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿಯವರು ಹಾಗೂ ಸ್ಥಳಿಯ ಶಾಸಕರಾದ ಉಮನಾಥ ಕೋಟ್ಯಾನ್, ಡಾ. ಭರತ್ ಶೆಟ್ಟಿ ಮತ್ತು ವೇದವ್ಯಾಸ ಕಾಮತ್ ಉಪಸ್ಥಿತಿಯಲ್ಲಿ ಎಂಆರ್ ಪಿಎಲ್ ನ ಆಡಳಿತ ನಿರ್ದೇಶರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಯಿತು.
ಸ್ಥಳೀಯರಿಗಾದ ಅನ್ಯಾಯದ ಬಗ್ಗೆ ಎಂಆರ್ ಪಿಎಲ್ ಅಧಿಕಾರಿಗಳೊಂದಿಗೆ ಚರ್ಚಿಸಿದರು ಹಾಗೂ ಸದರಿ ನೇಮಕಾತಿ ಪಟ್ಟಿಯನ್ನು ಕೂಡಲೇ ತಡೆಹಿಡಿಯಲು ಆದೇಶಿಸಲಾಗಿದ್ದು, ಎಂಆರ್ ಪಿಎಲ್ ಆಡಳಿತ ನಿರ್ದೇಶಕರು ಸದರಿ ನೇಮಕಾತಿಯನ್ನು ತಡೆಹಿಡಿಯಲು ಸಮ್ಮತಿಸಿದ್ದಾರೆ ಎಂದು ತಿಳಿದು ಬಂದಿದೆ.
ನೇಮಕಾತಿಯ ಮುಂದಿನ ಪ್ರಕ್ರಿಯೆಯನ್ನು ಸಂಸದರ, ಉಸ್ತುವಾರಿ ಸಚಿವರ ಹಾಗೂ ಸ್ಥಳೀಯ ಶಾಸಕರ ಮಾರ್ಗದರ್ಶನದಲ್ಲಿ ನಡೆಸಲು ಆದೇಶಿಸಲಾಯಿತು.