ಬಂಟ್ವಾಳ : ಹೋಟೆಲ್ ಮಾಲಕನೋರ್ವ ಅಪ್ರಾಪ್ತ ಶಾಲಾ ಬಾಲಕಿಗೆ ದೈಹಿಕ ಹಿಂಸೆ ನೀಡಿದ ಘಟನೆ ಸಜೀಪ ನಡು ಗ್ರಾಮದಲ್ಲಿ ನಡೆದಿದ್ದು, ಆರೋಪಿ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದೆ.
ಸಜೀಪ ನಡು ಗ್ರಾಮದ ಅಬ್ದುಲ್ಲಾ ಆರೋಪಿಯಾಗಿದ್ದು, ಈತನಿಂದ ಅಪ್ರಾಪ್ತ ಶಾಲಾ ಬಾಲಕಿಗೆ ದೈಹಿಕ ಹಿಂಸೆಯಾದ ಬಗ್ಗೆ ಬಾಲಕಿಯ ತಾಯಿ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಎಸ್.ಐ. ಮೂರ್ತಿ ಹಾಗೂ ಸಿಬ್ಬಂದಿಗಳು ಬಂಧಿಸಿದ್ದಾರೆ ಎಂದು ವರದಿಯಾಗಿದೆ.