ವಿಟ್ಲ : ಮೂರು ದಿನಗಳ ಹಿಂದೆ ವಿದೇಶದಿಂದ ಬಂದಿದ್ದ ಯುವಕ ಅನಾರೋಗ್ಯದಿಂದ ಮೃತಪಟ್ಟ ಘಟನೆ ವಿಟ್ಲ ಸಮೀಪದ ಕೇಪು ಎಂಬಲ್ಲಿ ನಡೆದಿದೆ.
ಕೇಪು ಗ್ರಾಮದ ಅಡ್ಯನಡ್ಕ ಮರಕ್ಕಿನಿ ನಿವಾಸಿ, ಅಬ್ದುಲ್ ರಹಿಮಾನ್ ಅವರ ಪುತ್ರ ಅಶ್ರಫ್ (38) ಮೃತ ಯುವಕ.
ಅಶ್ರಫ್ ಕಳೆದ ಹಲವಾರು ವರುಷಗಳಿಂದ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಅನಾರೋಗ್ಯದ ಹಿನ್ನೆಲೆ ಸ್ವದೇಶಕ್ಕೆ ಆಗಮಿಸಿದ್ದರು.
ಕೇರಳದ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಅವರು ಬಳಿಕ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಪತ್ನಿ, ಪುತ್ರ, ಪುತ್ರಿ, ತಾಯಿಯನ್ನು ಅಗಲಿದ್ದಾರೆ.