ಪುತ್ತೂರು : ಟಿಪ್ಪರ್ ಹಾಗೂ ಬೈಕ್ ಮಧ್ಯೆ ಸಂಪ್ಯ ಕಲ್ಲರ್ಪೆ ಸಮೀಪ ನಿನ್ನೆ ಸಂಜೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.
ಮುಕ್ವೆ ನಿವಾಸಿ ಸಫ್ವಾನ್ ಮೃತ ಯುವಕ.
ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸಫ್ವಾನ್ ಗಂಭೀರ ಗಾಯಗೊಂಡಿದ್ದರು ಕೂಡಲೇ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆ ತಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಸಂಪ್ಯ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.