ಪುತ್ತೂರು: ಕೊರೋನಾ ಸೋಂಕು ಮತ್ತು ಡೆಂಗ್ಯೂ ಸಾಂಕ್ರಾಮಿಕ ರೋಗ ಭೀತಿಯ ಹಿನ್ನೆಲೆಯಲ್ಲಿ ಸೊಳ್ಳೆಗಳ ಹಾವಳಿ ನಿಯಂತ್ರಿಸಲು ನಗರಸಭೆಯಿಂದ ಆಸ್ಪತ್ರೆ ಸೇರಿದಂತೆ ವಿವಿಧ ಕಡೆಗಳಲ್ಲಿ ಮೇ .22ರಂದು ಸಂಜೆ ಫಾಗಿಂಗ್ ಮಾಡಲಾಯಿತು.
ನಗರಸಭೆ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗಗಳ ಭೀತಿಯ ಹಿನ್ನೆಲೆಯಲ್ಲಿ ಸೊಳ್ಳೆಗಳ ಹಾವಳಿ ನಿಯಂತ್ರಿಸಲು ನಗರಸಭೆ ಆರೋಗ್ಯ ಇಲಾಖೆ ಮತ್ತು ಕಾರ್ಮಿಕರು ಸರಕಾರಿ ಆಸ್ಪತ್ರೆ, ಪೊಲೀಸ್ ವಸತಿಗೃಹ, ಸರಕಾರಿ ಕಚೇರಿಗಳು ಮತ್ತು ವಿವಿಧ ಕಡೆಗಳಲ್ಲಿ ಫಾಗಿಂಗ್ ಕಾರ್ಯ ನಡೆಸಿದರು.
ಕೆಲವು ಪ್ರದೇಶದಲ್ಲಿ ಕೊರೋನಾ ಸೋಂಕಿನ ಜೊತೆಗೆ ಶಂಕಿತ ಡೆಂಗ್ಯೂ , ಮಲೇರಿಯಾ ಪತ್ತೆಯಾದ ಹಿನ್ನೆಲೆಯಲ್ಲಿ ಅದನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗಿದೆ. ಮುಂದೆ ನಗರಸಭೆ ಅಗತ್ಯವಿರುವ ವಾರ್ಡ್‌ಗಳಿಗೆ ಫಾಗಿಂಗ್ ಮಾಡಿಸಲಾಗುವುದು ಎಂದು ನಗರಸಭೆ ಅಧ್ಯಕ್ಷರಾದ ಕೆ.ಜೀವಂಧರ್ ಜೈನ್ ಅವರು ಹೇಳಿದ್ದಾರೆ.