ಪುತ್ತೂರು: ಕೆಯ್ಯೂರು ಗ್ರಾಮದ ತೆಗ್ಗು ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಭಾಸ್ಕರ್ ರೈ ದೇರಾಜೆ(54ವ)ರವರು ಮೇ.23ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕೆಯ್ಯೂರು ಗ್ರಾಮದ ದೇರಾಜೆ ನಿವಾಸಿ ಭಾಸ್ಕರ್ ರೈ ಅವರು ಪ್ರಗತಿಪರ ಕೃಷಿಕರಾಗಿದ್ದು, ಅವರಿಗೆ ಎದೆ ನೋವು ಉಂಟಾಗಿ ಪುತ್ತೂರು ಆಸ್ಪತ್ರೆಗೆ ಕರೆತಂದಾಗ ಚಿಕಿತ್ಸೆಗೆ ಸ್ಪಂಧಿಸದೆ ಅವರು ಮೃತಪಟ್ಟಿದ್ದಾರೆ. ತೆಗ್ಗು ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿಯಾಗಿರುವ ಇವರು ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು. ಸ್ನೇಹ ಫ್ರೆಂಡ್ಸ್‌ನ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಮೃತರು ಪತ್ನಿ, ಪುತ್ರನನ್ನು ಅಗಲಿದ್ದಾರೆ.