ಉಪ್ಪಿನಂಗಡಿ : ಮಾದಕದ್ರವ್ಯ ಸೇವನೆ ಮಾಡಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನೆಕ್ಕಿಲಾಡಿ ಜಂಕ್ಷನ್ ನಲ್ಲಿ ನಡೆದಿದೆ.
ಸವಣೂರು ನಿವಾಸಿ ಪಿ. ಹನೀಫ್, ಮಹಮ್ಮದ್ ಶಾಫಿ ಬಂಧಿತರು.
ಉಪ್ಪಿನಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕರಾದ ಅವಿನಾಶ್ ಹೆಚ್ ಹಾಗೂ ಸಿಬ್ಬಂದಿಗಳು, ಆಪಾದಿತರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕದ್ರವ್ಯ ಸೇವನೆ ಮಾಡಿರುವುದು ದೃಢಪಟ್ಟಿರುತ್ತದೆ.
ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ : 25/2024ಕಲಂ: 27 (a) ಎನ್.ಡಿ.ಪಿ.ಎಸ್ ಕಾಯ್ದೆ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

























