ಬಂಟ್ವಾಳ : ನೇರಳಕಟ್ಟೆ ಸಿ.ಎ.ಬ್ಯಾಂಕ್ ನ ನಿವೃತ್ತ ಪ್ರಬಂಧಕ ಸಹಕಾರಿ ದುರೀಣ, ಸಾಮಾಜಿಕ ಮುಂದಾಳು ನಾರಾಯಣ ಶೆಟ್ಟಿ ಕೊಂಬಿಲರವರು ಇಂದು ಬೆಳಿಗ್ಗೆ ಅನಂತಾಡಿ ಗ್ರಾಮದಲ್ಲಿನ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು.
ಜನಸಂಘದ ಕಾಲದಿಂದಲೂ ಕಾರ್ಯಕರ್ತರಾಗಿ ಅನಂತಾಡಿ ಗ್ರಾಮದಲ್ಲಿ ಬಿಜೆಪಿ ಪಕ್ಷ ದ ಬೆಳೆಸುವಲ್ಲಿ ಮಹತ್ವದ ಪಾತ್ರವಹಿಸಿದ್ದರು. ವಿಶ್ವ ಹಿಂದೂ ಪರಿಷತ್ ನ ಸಕ್ರಿಯ ಕಾರ್ಯಕರ್ತರಾಗಿ ಜಿಲ್ಲಾ ಮಟ್ಟದಲ್ಲಿ ಕೂಡ ಸೇವೆ ಸಲ್ಲಿಸಿದ್ದರು. ಮಾಣಿ ಬಾಲವಿಕಾಸ ಟ್ರಸ್ಟ್ ನ ಕಾರ್ಯದರ್ಶಿ ಯಾಗಿ ಮಾಣಿ ಬಾಲವಿಕಾಸ ಆಂಗ್ಲ ಮಾದ್ಯಮ ಶಾಲೆಯ ಅಭಿವೃದ್ಧಿ ಗೆ ಪ್ರಮುಖ ಪಾತ್ರವಹಿಸಿದ್ದರು.ಇವರ ನಿಧನ ಕ್ಕೆ ಪರಿಸರದ ಸಾಮಾಜಿಕ, ರಾಜಕೀಯ ಪ್ರಮುಖರು ವಿವಿಧ ಸಂಘ ಸಂಸ್ಥೆಗಳ ಪದಾದಿಕಾರಿಗಳು , ಸಂತಾಪ ಸೂಚಿಸಿದ್ದಾರೆ.