ಪುತ್ತೂರು : ಕಾರು ಮತ್ತು ಪಿಕಪ್ ವಾಹನದ ನಡುವೆ ಅಪಘಾತ ಸಂಭವಿಸಿದ ಹಿನ್ನೆಲೆ ಎರಡು ತಂಡಗಳ ನಡುವೆ ವಾಗ್ವಾದ ಸಂಭವಿಸಿದ ಘಟನೆ ದರ್ಬೆಯಲ್ಲಿ ನಡೆದಿದೆ.

ದರ್ಬೆ ಸಮೀಪ ಕಾರು ಮತ್ತು ಪಿಕಪ್ ವಾಹನದ ನಡುವೆ ಸಂಭವಿಸಿದ್ದು, ಎರಡು ವಾಹನಗಳ ಸವಾರರ ನಡುವೆ ಕೆಲ ಕಾಲ ವಾಗ್ವಾದ ನಡೆಯಿತು.

ಕೆಲ ಕಾಲ ಸ್ಥಳದಲ್ಲಿ ಹಲವು ಮಂದಿ ಜಮಾಯಿಸಿದ್ದು, ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.