ಮಂಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ರೌಡಿಶೀಟರ್ ಗಳ ಹಾಗೂ ಇತರ ಅಪರಾಧ ಹಿನ್ನೆಲೆಯುಳ್ಳವರ ಮನೆಗಳಿಗೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ, ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ರೌಡಿ ಶೀಟರ್ ಗಳು ಹಾಗೂ ಇತರ ಅಪರಾಧ ಹಿನ್ನೆಲೆಯನ್ನು ಹೊಂದಿರುವವರ ಮನೆಗಳಿಗೆ, ಆಯಾ ಠಾಣಾ ವ್ಯಾಪ್ತಿಯ ಠಾಣಾಧಿಕಾರಿಗಳು ಫೆ.29 ರಂದು ರಾತ್ರಿ ಧಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಯಾವುದೇ ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿಸಿಕೊಳ್ಳದಂತೆ ಎಚ್ಚರಿಕೆ ನೀಡಿದರು.