ಬೆಂಗಳೂರು : ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಇಂದಿನಿಂದ (ಶುಕ್ರವಾರ) ಆರಂಭವಾಗಲಿದೆ.
ರಾಜ್ಯಾದ್ಯಂತ ಈ ಬಾರಿ 1,124 ಕೇಂದ್ರಗಳಲ್ಲಿ 6.98 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಇಂದಿನಿಂದ ಮಾ.22 ರ ವರೆಗೆ ನಿತ್ಯ ಬೆಳಗ್ಗೆ 10:15 ರಿಂದ ಮಧ್ಯಾಹ್ನ 1:30 ರ ವರೆಗೆ ಪರೀಕ್ಷೆಗಳು ನಡೆಯಲಿವೆ.
ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಯಾವುದೇ ಪರೀಕ್ಷಾ ಅಕ್ರಮಗಳು ನಡೆಯದಂತೆ ನೋಡಿಕೊಳ್ಳಲು ಕ್ರಮವಹಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಬೆಳಗ್ಗೆ 9:30 ರಿಂದ ಮಧ್ಯಾಹ್ನ 2 ರ ವರೆಗೆ ಜೆರಾಕ್ಸ್ ಅಂಗಡಿಗಳು ಬಂದ್ ಆಗಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಬಾರಿ 6,98,624 ವಿದ್ಯಾರ್ಥಿಗಳು ದ್ವೀತಿಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ. 2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಇನ್ನು ಉಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ.



























