ಕಡಬ: ವಿದ್ಯುತ್ ಶಾಕ್ ತಗುಲಿ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬದಲ್ಲಿ ಮೇ.24ರಂದು ನಡೆದಿದೆ. ಮೃತ ವ್ಯಕ್ತಿಯನ್ನು ಕಡಬ ಸಮೀಪದ ಕುಟ್ರುಪ್ಪಾಡಿ ಗ್ರಾಮದ ಬಡಬೆಟ್ಟು ನಿವಾಸಿ ತಂಗಚ್ಚನ್ ಎಂಬವರ ಪುತ್ರ ಲಿಜು (35 ) ಎಂದು ಗುರುತಿಸಲಾಗಿದೆ.
ಇಂದು ಬೆಳಿಗ್ಗೆ ತನ್ನ ಮನೆಯ ಮುಂಭಾಗದಲ್ಲಿ ಕಬ್ಬಿಣದ ಸಲಾಕೆಯಿಂದ ತೆಂಗಿನಕಾಯಿ ತೆಗೆಯುತ್ತಿದ್ದ ವೇಳೆ ಸಲಾಕೆಯು ವಿದ್ಯುತ್ ತಂತಿಗೆ ಸ್ಪರ್ಶಿಸಿದೆ. ವಿದ್ಯುತ್ ಹರಿದು ಲಿಜು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.