ಕಡಬ : ಕಾಲೇಜು ಆವರಣದೊಳಗೆ ಯುವಕನೋರ್ವ ನುಗ್ಗಿ ಆ್ಯಸಿಡ್ ದಾಳಿ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಯುವಕನನ್ನು ವಶಕ್ಕೆ ಪಡೆಯಲಾಗಿದೆ.
ಕೇರಳ ಮೂಲದ ಅಬೀನ್ (23) ಬಂಧಿತ ಯುವಕ.
ಮಾ.4 ರಂದು ಬೆಳಿಗ್ಗೆ ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯೋರ್ವಳ ಮೇಲೆ ಕಾಲೇಜ್ ಆವರಣದಲ್ಲಿ ಯುವಕನೋರ್ವ ಆ್ಯಸಿಡ್ ಎರಚಿರುವ ಘಟನೆ ನಡೆದಿರುತ್ತದೆ.
ಘಟನೆಯ ವೇಳೆ ವಿದ್ಯಾರ್ಥಿನಿಯ ಪಕ್ಕದಲ್ಲಿದ್ದ ಇಬ್ಬರು ವಿದ್ಯಾರ್ಥಿನಿಯರಿಗೂ ಆ್ಯಸಿಡ್ ತಗುಲಿ ಸಣ್ಣ ಪ್ರಮಾಣದ ಗಾಯಗಳಾಗಿರುತ್ತದೆ.
ಈಗಾಗಲೇ ಆರೋಪಿ ಅಬೀನ್ (23) ಎಂಬಾತನನ್ನು ವಶಕ್ಕೆ ಪಡೆಯಲಾಗಿದ್ದು, ಆರೋಪಿ ಮತ್ತು ಆ್ಯಸಿಡ್ ದಾಳಿಗೊಳಗಾದ ವಿದ್ಯಾರ್ಥಿನಿ ಒಂದೇ ಕೋಮಿಗೆ ಸೇರಿದವರಾಗಿರುತ್ತಾರೆ.
ಪ್ರಾಥಮಿಕ ತನಿಖೆಯಲ್ಲಿ ಪ್ರೇಮ ವೈಫಲ್ಯದ ಹಿನ್ನಲೆಯಲ್ಲಿ ಆರೋಪಿ ಈ ಕೃತ್ಯ ನಡೆಸಿರುವುದಾಗಿ ತಿಳಿದುಬಂದಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

























