ಬಂಟ್ವಾಳ : ಅರಣ್ಯ ಇಲಾಖೆಯ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾ.5. ರಂದು ರಾತ್ರಿ ಬಂಟ್ವಾಳ ತಾಲೂಕು ಪುದು ಗ್ರಾಮದ ಫರಂಗಿಪೇಟೆ ಎಂಬಲ್ಲಿ, ಬೆಂಗಳೂರು-ಮಂಗಳೂರು ರಾಷ್ಟೀಯ ಹೆದ್ದಾರಿಯಲ್ಲಿ ಬಂದ ಅರಣ್ಯ ಇಲಾಖೆಯ ಸರ್ಕಾರಿ ಜೀಪನ್ನು ಚಾಲಕ ಜಗದೀಶ್ ಗೌಡ ರವರು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು, ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ದಾಟುತ್ತಿದ್ದ ಅಪರಿಚಿತ ಪಾದಚಾರಿಯೊಬ್ಬರಿಗೆ ಡಿಕ್ಕಿ ಪಡಿಸಿರುತ್ತಾರೆ.
ಅಪಘಾತದ ಪರಿಣಾಮ ಪಾದಚಾರಿ ಡಾಮಾರು ರಸ್ತೆಗೆ ಎಸೆಯಲ್ಪಟ್ಟು ತಲೆಗೆ ತೀವ್ರ ಗಾಯವಾಗಿದ್ದು, ಸಾರ್ವಜನಿಕರು ಅಪಘಾತಪಡಿಸಿದ ಜೀಪಿನಲ್ಲಿಯೇ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿಯ ವ್ಯೆದ್ಯರು ಪರೀಕ್ಷಿಸಿ ಪಾದಚಾರಿ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ : 38/2024 ಕಲಂ : 279,304(ಎ) ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.



























