ಪುತ್ತೂರು : ನಿವೃತ್ತ ಸೇನಾಧಿಕಾರಿ, ಯುವ ನಾಯಕ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದ್ದು, ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿದಂತಿದೆ.
ಟಿಕೆಟ್ ಘೋಷಣೆ ಬೆನ್ನಲ್ಲೇ ಪುತ್ತೂರಿಗೆ ಕ್ಯಾಪ್ಟನ್ ಭೇಟಿ ನೀಡಲಿದ್ದಾರೆ.
ಇಂದು (ಮಾ.14) ಸಂಜೆ 3 ಗಂಟೆಗೆ ಪುತ್ತೂರಿನ ಭಾರತೀಯ ಜನತಾ ಪಾರ್ಟಿ ಕಚೇರಿಗೆ ಭೇಟಿ ನೀಡಲಿದ್ದು, ಬಳಿಕ 4 ಗಂಟೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದಾರೆ.

























