ಬಂಟ್ವಾಳ : ನಿವೃತ್ತ ಸೇನಾಧಿಕಾರಿ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದ್ದು, ಆಯ್ಕೆಯಾದ ಬೆನ್ನಲ್ಲೇ ಕ್ಯಾಪ್ಟನ್ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರಾದ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಭೇಟಿ ಮಾಡಿದರು.

ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಭೇಟಿ ಮಾಡಿದ ಚೌಟ ಅವರು ಕೆಲ ಸಮಯ ಭಟ್ ಅವರ ಜೊತೆ ಮಾತುಕತೆ ನಡೆಸಿ ಸಲಹೆ ಸೂಚನೆಗಳನ್ನು ಪಡೆದುಕೊಂಡರು.


























