ಪುತ್ತೂರು : ಕಾಪ್ಟನ್ ಬ್ರಿಜೇಶ್ ಚೌಟ ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವುದನ್ನು ಪುತ್ತೂರು ಬಿಜೆಪಿ ನಗರ ಮಂಡಲ ವತಿಯಿಂದ ಹಾರ್ದಿಕವಾಗಿ ಸ್ವಾಗತಿಸುತ್ತೇವೆ ಹಾಗೂ ಅವರು ಅತ್ಯಧಿಕ ಬಹುಮತಗಳಿಂದ ವಿಜಯಿಯಾಗಲಿದ್ದಾರೆ ಎಂದು ಬಿಜೆಪಿ ಪುತ್ತೂರು ನಗರ ಮಂಡಲದ ಅಧ್ಯಕ್ಷ ಪಿ.ಜಿ. ಜಗನ್ನಿವಾಸ ರಾವ್ ರವರು ತಿಳಿಸಿದ್ದಾರೆ.
ಈಗಿನ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರೂ 3 ಅವಧಿಗಳಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಅತ್ಯಧಿಕ ಅನುದಾನಗಳನ್ನು ಒದಗಿಸಿಲ್ಲದೆ, ರಾಜ್ಯಾಧ್ಯಕ್ಷರಾಗಿ ಪಕ್ಷವನ್ನು ತಳಮಟ್ಟದಲ್ಲಿ ಸಂಘಟಿಸುವಲ್ಲಿ ತನ್ನ ಕೊಡುಗೆಯನ್ನು ನೀಡಿದ್ದಾರೆ ಎಂದು ಹೇಳಿದರು.

























