ಉಪ್ಪಿನಂಗಡಿ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಗೋಳಿತೊಟ್ಟು ಸಮೀಪ ನಡೆದಿದೆ.
ಮಂಗಳೂರಿನಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಐ20 ಕಾರು ಚಾಲಕನ ನಿಯಂತ್ರಣ ತಪ್ಪಿ ಗೋಳಿತೊಟ್ಟು ಸಮೀಪ ಪಲ್ಟಿಯಾಗಿದೆ.

ಘಟನೆಯಲ್ಲಿ ಚಾಲಕ ಸಹಿತ ಮೂವರಿಗೆ ಗಾಯವಾಗಿದ್ದು, ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.

























