ಬೆಂಗಳೂರು : ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ ಅವರು ಬಿಜೆಪಿ ಸೇರ್ಪಡೆಯಾಗುವುದು ಖಚಿತವಾಗಿದ್ದು, ಬೆಂಗಳೂರಿನ ಬಿಜೆಪಿ ಕಚೇರಿಗೆ ಭೇಟಿ ನೀಡಿದ್ದಾರೆ.

ಪುತ್ತಿಲ ಅವರ ಜೊತೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಪುತ್ತೂರು ಮಂಡಲಾಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪಿಜಿ ಜಗನ್ನಿವಾಸ್ ರಾವ್, ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ ಸಹಿತ ಹಲವು ಬಿಜೆಪಿ ಪ್ರಮುಖರು ಸಾಥ್ ನೀಡಿದ್ದಾರೆ.

























